Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:5 - ಕನ್ನಡ ಸತ್ಯವೇದವು C.L. Bible (BSI)

5 ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇನ್ನು ಮುಂದೆ ಇಸ್ರಾಯೇಲ್ಯರ ಮೇಲೆ ದೇವರ ಕೋಪವುಂಟಾಗದಂತೆ ನೀವೇ ದೇವಸ್ಥಾನದ ಸಾಮಾನನ್ನೂ ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:5
25 ತಿಳಿವುಗಳ ಹೋಲಿಕೆ  

ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆ ದೀಪಗಳು ಉರಿಯುತ್ತಿರಬೇಕು. ಅವು ಸರ್ವೇಶ್ವರನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.


ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.


ಅವರ ವಂಶಜರು ದೇವಾಲಯದ ದ್ವಾರಪಾಲಕರಾಗಿ ಸೇವೆ ಮುಂದುವರೆಸಿಕೊಂಡು ಬಂದರು.


ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.


ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”


“ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ವೇದಿಕೆಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.


ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.


ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.


ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.


“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು