ಅರಣ್ಯಕಾಂಡ 18:7 - ಕನ್ನಡ ಸತ್ಯವೇದವು C.L. Bible (BSI)7 ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನೂ ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯೊಳಗಣ ಕಾರ್ಯಗಳನ್ನು ನಡಿಸಬೇಕು; ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು; ನಾನು ಯಾಜಕತ್ವವನ್ನು ನಿಮಗೇ ಅನುಗ್ರಹಿಸಿದ್ದೇನೆ; ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು. ಅಧ್ಯಾಯವನ್ನು ನೋಡಿ |