ಅರಣ್ಯಕಾಂಡ 19:18 - ಕನ್ನಡ ಸತ್ಯವೇದವು C.L. Bible (BSI)18 ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಶುದ್ಧನಾಗಿರುವ ಒಬ್ಬನು ಹಿಸ್ಸೋಪ್ ಗಿಡದ ಎಳೆಕೊಂಬೆಯನ್ನು ಆ ನೀರಿನಲ್ಲಿ ಅದ್ದಿ ಗುಡಾರದ ಮೇಲೆಯೂ ಪಾತ್ರೆಗಳ ಮೇಲೆಯೂ ಮತ್ತು ಅದರೊಳಗಿದ್ದ ವ್ಯಕ್ತಿಗಳ ಮೇಲೆಯೂ ಚಿಮಿಕಿಸಬೇಕು. ಸತ್ತವನ ದೇಹವನ್ನು ಮುಟ್ಟಿದವನಿಗೂ ಯುದ್ಧದಲ್ಲಿ ಕೊಲ್ಲಲ್ಪಟ್ಟವನ ದೇಹವನ್ನು ಮುಟ್ಟಿದವನಿಗೂ ಸತ್ತವನ ಮೂಳೆಗಳನ್ನು ಮುಟ್ಟಿದವನಿಗೂ ನೀವು ಹೀಗೆ ಮಾಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |