Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:22 - ಕನ್ನಡ ಸತ್ಯವೇದವು C.L. Bible (BSI)

22 ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅಶುದ್ಧನಿಗೆ ಸೋಂಕಿದ ವಸ್ತು ಯಾವದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು; ಅದು ಯಾರಿಗೆ ಸೋಂಕಿತೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಶುದ್ಧನಾದವನು ಮುಟ್ಟುವುದೆಲ್ಲಾ ಅಶುದ್ಧವಾಗುತ್ತದೆ. ಅಲ್ಲದೆ ಅವನನ್ನು ಮಟ್ಟುವವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:22
21 ತಿಳಿವುಗಳ ಹೋಲಿಕೆ  

ಆಗ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುತ್ತದೋ” ಎಂದು ಕೇಳಿದನು. ಅದಕ್ಕೆ ಯಾಜಕರು: “ಖಂಡಿತವಾಗಿ ಅಶುದ್ಧವಾಗುತ್ತದೆ” ಎಂದು ಉತ್ತರಕೊಟ್ಟರು.


“ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


“ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.


“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.


“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.


ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:


ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು