Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:7 - ಕನ್ನಡ ಸತ್ಯವೇದವು C.L. Bible (BSI)

7 ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದನಂತರ ಪಾಳೆಯದೊಳಗೆ ಬರಬಹುದು, ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:7
19 ತಿಳಿವುಗಳ ಹೋಲಿಕೆ  

ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.


ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.


ಆ ಆಕಳನ್ನು ಸುಟ್ಟವನು ಕೂಡ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿ ಆ ದಿನದ ಸಂಜೆಯ ತನಕ ಮಡಿಗೆಟ್ಟವನಾಗಿರಬೇಕು.


ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.


ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸಂಜೆಯವರೆಗೆ ಮಡಿಗೆಟ್ಟವನಾಗಿರಬೇಕು. ಇದು ಇಸ್ರಯೇಲರಿಗೂ ಅವರ ಮಧ್ಯೆ ವಾಸಿಸುವ ಇತರರಿಗೂ ಅನ್ವಯಿಸುವ ಶಾಶ್ವತ ನಿಯಮ.


“ಇದು ಇಸ್ರಯೇಲರಿಗೆ ಶಾಶ್ವತ ನಿಯಮವಾಗಿರುತ್ತದೆ. ಮೈಲಿಗೆ ನೀಗಿಸುವ ಆ ನೀರನ್ನು ಚಿಮುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಆ ನೀರನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೂ ಮಡಿಗೆಟ್ಟವನಾಗಿರುವನು.


ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.


ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು