Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:17 - ಕನ್ನಡ ಸತ್ಯವೇದವು C.L. Bible (BSI)

17 “ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನಂತರ ಸೈನ್ಯಗಳ ನಟ್ಟನಡುವೆಯಲ್ಲಿ ದೇವದರ್ಶನದ ಗುಡಾರವೂ ಲೇವಿಯರ ಪಾಳೆಯದವರೂ ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:17
8 ತಿಳಿವುಗಳ ಹೋಲಿಕೆ  

ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಬಳಿಕ ದೇವದರ್ಶನದ ಗುಡಾರವನ್ನು ಇಳಿಸಿದ್ದೇ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.


ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.


ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.


ಸರ್ವೇಶ್ವರ ಸ್ವಾಮಿ ಮೋಶೆ - ಆರೋನರಿಗೆ ಕೊಟ್ಟ ಆಜ್ಞೆ ಇದು:


ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು