Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:18 - ಕನ್ನಡ ಸತ್ಯವೇದವು C.L. Bible (BSI)

18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪಶ್ಚಿಮದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:18
13 ತಿಳಿವುಗಳ ಹೋಲಿಕೆ  

ತದನಂತರ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರ ಸೇನಾನಾಯಕ ಅಮ್ಮೀಹೂದನ ಮಗ ಎಲೀಷಾಮನು.


ಜೀಸೆಫನ ವಂಶದವರಲ್ಲಿ - ಎಫ್ರಾಯಿಮ್ ಕುಲದಿಂದ ಅಮ್ಮೀಹೂದನ ಮಗ ಎಲೀಷಾಮಾ ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಹೂದನ ಮಗ ಎಲೀಷಾವನು ಸಮರ್ಪಿಸಿದ ಕಾಣಿಕೆಗಳು ಇವೇ.


ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:


ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:


“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.


ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 40,500:


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು