Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:34 - ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಹಾಗೆಯೇ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು ಮತ್ತು ಗೋತ್ರಕುಟುಂಬಗಳ ಪ್ರಕಾರವೇ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಹಾಗೆಯೇ ದಂಡುದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು; ಹಾಗೆಯೇ ಗೋತ್ರ ಕುಟುಂಬಗಳ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಹೀಗೆ ಯೆಹೋವನು ಮೋಶೆಗೆ ಹೇಳಿದ ಪ್ರತಿಯೊಂದನ್ನು ಇಸ್ರೇಲರು ಮಾಡಿದರು. ತಮ್ಮ ಕ್ರಮಕ್ಕನುಸಾರವಾಗಿ ಅವರು ಪಾಳೆಯ ಮಾಡಿಕೊಂಡರು. ನೇಮಕವಾದ ಪ್ರಕಾರವೇ ಪ್ರಯಾಣ ಮಾಡುತ್ತಿದ್ದರು; ಪ್ರತಿಯೊಬ್ಬನು ತನ್ನ ಸ್ವಂತ ಕುಲದೊಡನೆಯೂ ಕುಟುಂಬದೊಡನೆಯೂ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:34
15 ತಿಳಿವುಗಳ ಹೋಲಿಕೆ  

ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಈ ಕ್ರಮದಲ್ಲಿ ಇಸ್ರಯೇಲರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣ ಮಾಡಿದರು.


ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.


ಸೀನಾಯಿ ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ - ಆರೋನರ ವಂಶಸ್ಥರ ವಿವರ:


ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು