ಅರಣ್ಯಕಾಂಡ 20:1 - ಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೊದಲನೆಯ ತಿಂಗಳಿನಲ್ಲಿ ಇಸ್ರಾಯೇಲರ ಸರ್ವಸಮೂಹದವರು “ಚಿನ್” ಎಂಬ ಮರುಭೂಮಿಗೆ ಬಂದು, ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ತೀರಿಹೋದಳು. ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೊದಲನೆಯ ತಿಂಗಳಲ್ಲಿ ಇಸ್ರಾಯೇಲ್ಯರ ಸರ್ವಸಮೂಹದವರು ಚಿನ್ ಎಂಬ ಅರಣ್ಯಕ್ಕೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ವಿುರ್ಯಾಮಳು ತೀರಿಹೋದಳು; ಆಕೆಯ ಶವವನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೊದಲನೆಯ ತಿಂಗಳಲ್ಲಿ ಇಡೀ ಇಸ್ರೇಲ್ ಸಮುದಾಯವು ಚಿನ್ ಮರುಭೂಮಿಗೆ ಬಂದಿತು. ಅವರು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಸತ್ತಳು. ಆಕೆಯ ಶವವನ್ನು ಅಲ್ಲಿ ಸಮಾಧಿ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |