Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:12 - ಕನ್ನಡ ಸತ್ಯವೇದವು C.L. Bible (BSI)

12 ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಈ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:12
26 ತಿಳಿವುಗಳ ಹೋಲಿಕೆ  

ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.


ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.


ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.


“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.


ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II


ಮೆರಿಬಾ ನದಿಯ ಬಳಿ ರೇಗಿಸಿದರಾತನನು I ಹೀಗೆ ಬರಮಾಡಿದರು ಮೋಶೆಗೂ ಹಾನಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು