ಅರಣ್ಯಕಾಂಡ 20:18 - ಕನ್ನಡ ಸತ್ಯವೇದವು C.L. Bible (BSI)18 ಆದರೆ ಎದೋಮ್ಯರು, “ನಮ್ಮ ನಾಡನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ ನಿಮ್ಮ ಮೇಲೆ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಎದೋಮ್ಯರು - ನಮ್ಮ ದೇಶವನ್ನು ನೀವು ದಾಟಿ ಹೋಗಕೂಡದು; ದಾಟುವದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ ಎಂದು ಉತ್ತರ ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಎದೋಮಿನ ಅರಸನು, “ನಮ್ಮ ದೇಶವನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ, ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು. ಅಧ್ಯಾಯವನ್ನು ನೋಡಿ |
ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.