ಅರಣ್ಯಕಾಂಡ 20:21 - ಕನ್ನಡ ಸತ್ಯವೇದವು C.L. Bible (BSI)21 ಹೀಗೆ ಎದೋಮ್ಯರು ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆಕೊಡದ ಕಾರಣ ಇಸ್ರಯೇಲರು ಅಲ್ಲಿಂದ ಹಿಂದಿರುಗಿ ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎದೋಮ್ಯರು ಇಸ್ರಾಯೇಲ್ಯರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವದಕ್ಕೆ ಅಪ್ಪಣೆಕೊಡದೆಹೋದದರಿಂದ ಇಸ್ರಾಯೇಲ್ಯರು ಅವರ ಕಡೆಯಿಂದ ತಿರುಗಿಕೊಂಡು [ಬೇರೊಂದು ಮಾರ್ಗವಾಗಿ] ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇಸ್ರೇಲರು ಅವನ ದೇಶವನ್ನು ಹಾದು ಹೋಗಲು ಎದೋಮ್ಯರ ಅರಸನು ಬಿಡಲಿಲ್ಲ. ಆಗ ಇಸ್ರೇಲರು ಬೇರೊಂದು ದಿಕ್ಕಿನಲ್ಲಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ಪ್ರಕಾರ ಎದೋಮ್ಯನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ. ಆದಕಾರಣ ಇಸ್ರಾಯೇಲರು ಅವನ ಕಡೆಯಿಂದ ತಿರುಗಿಕೊಂಡು ಹೊರಟು ಹೋದರು. ಅಧ್ಯಾಯವನ್ನು ನೋಡಿ |
ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.