ಅರಣ್ಯಕಾಂಡ 20:24 - ಕನ್ನಡ ಸತ್ಯವೇದವು C.L. Bible (BSI)24 “ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆರೋನನು ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಆರೋನನು ಸತ್ತು ಪೂರ್ವಿಕರ ಬಳಿ ಸೇರುವ ಸಮಯ ಬಂದಿದೆ. ಇಸ್ರೇಲರಿಗೆ ನಾನು ವಾಗ್ದಾನ ಮಾಡಿದ ದೇಶದೊಳಗೆ ಆರೋನನು ಪ್ರವೇಶಿಸುವುದಿಲ್ಲ. ಯಾಕೆಂದರೆ ನೀವಿಬ್ಬರೂ ಮೆರೀಬಾ ಬುಗ್ಗೆಯ ಕುರಿತಾಗಿ ನಾನು ಕೊಟ್ಟ ಆಜ್ಞೆಗೆ ವಿಧೇಯರಾಗದಿದ್ದುದರಿಂದ ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ. ಅಧ್ಯಾಯವನ್ನು ನೋಡಿ |