Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:26 - ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿ ಆರೋನನ ಯಾಜಕ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಜರ ಬಳಿ ಸೇರಲಿ,” ಎಂದು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ತನ್ನ ಪೂರ್ವಿಕರ ಬಳಿಗೆ ಸೇರಬೇಕು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಬೇಕು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು ಎಂದು ಆಜ್ಞಾ ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆರೋನನ ಪ್ರತಿಷ್ಠಿತ ವಸ್ತ್ರಗಳನ್ನು ಅವನಿಂದ ತೆಗೆದು ಅವನ ಮಗನಾದ ಎಲ್ಲಾಜಾರನ ಮೇಲೆ ಹಾಕು. ಆರೋನನು ಅಲ್ಲಿ ಬೆಟ್ಟದ ಮೇಲೆ ಸತ್ತು ಪೂರ್ವಿಕರ ಬಳಿ ಸೇರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆರೋನನ ವಸ್ತ್ರಗಳನ್ನು ತೆಗೆದು, ಅವುಗಳನ್ನು ಅವನ ಮಗ ಎಲಿಯಾಜರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:26
7 ತಿಳಿವುಗಳ ಹೋಲಿಕೆ  

“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಮಾಡಿದನು. ಸರ್ವಸಮೂಹದವರು ನೋಡುತ್ತಿರುವಾಗ ಅವರು ಹೋರ್ ಬೆಟ್ಟವನ್ನು ಹತ್ತಿದರು.


“ಮಿದ್ಯಾನರು ಇಸ್ರಯೇಲರಿಗೆ ಮಾಡಿದ ಹಿಂಸೆಗಾಗಿ ನೀನು ಮುಯ್ಯಿತೀರಿಸಬೇಕು. ಅನಂತರ ನಿನ್ನ ಪೂರ್ವಜರ ಬಳಿಗೆ ನೀನು ಸೇರಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು