Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:8 - ಕನ್ನಡ ಸತ್ಯವೇದವು C.L. Bible (BSI)

8 ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಬಳಿಕ ನೀನು ಮತ್ತು ನಿನ್ನ ಸಹೋದರನಾದ ಆರೋನನು ಜನರನ್ನು ಬಂಡೆಯ ಮುಂದೆ ಸಭೆಸೇರಿಸಿ, ಜನರ ಮುಂದೆ ಆ ಬಂಡೆಗೆ ಮಾತಾಡು. ಆಗ ನೀರು ಬಂಡೆಯಿಂದ ಹರಿಯುವುದು ಮತ್ತು ನೀರನ್ನು ಜನರಿಗೂ ಅವರ ಪಶುಗಳಿಗೂ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:8
31 ತಿಳಿವುಗಳ ಹೋಲಿಕೆ  

ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.


ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.


ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.


ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II


ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.


ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.


ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.


ಹಿರಿಯರು ತೋಡಿದರೀ ಬಾವಿಯನ್ನು ಕೋಲುಕಡ್ಡಿಗಳಿಂದ ಪ್ರಜಾಧಿಪತಿಗಳು ಅಗೆದರಿದನ್ನು ರಾಜದಂಡಗಳಿಂದ.


ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು’ ದಾಟಿದ್ದಾಯಿತು.


ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.


‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.


ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.


ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.


ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.


ಆಗ ಸರ್ವೇಶ್ವರ ಮೋಶೆಗೆ, “ನೀನು ಆ ಕೋಲನ್ನು ಕೈಗೆ ತೆಗೆದುಕೋ. ನೀನು ಮತ್ತು ನಿನ್ನ ಸಹೋದರ ಆರೋನನು ಜನಸಮೂಹದವರನ್ನು ಸಭೆ ಸೇರಿಸಿರಿ. ಅವರೆಲ್ಲರ ಎದುರಿನಲ್ಲೇ ನೀರುಕೊಡಬೇಕೆಂದು ಆ ಕಡಿದಾದ ಬಂಡೆಗೆ ಆಜ್ಞೆಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು