Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:22 - ಕನ್ನಡ ಸತ್ಯವೇದವು C.L. Bible (BSI)

22 “ನಿಮ್ಮ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು, ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹಾದುಹೋಗುವುದಿಲ್ಲ; ನಿಮ್ಮ ನಾಡನ್ನು ದಾಟುವವರೆಗೂ ರಾಜಮಾರ್ಗದಲ್ಲೇ ನಡೆದುಹೋಗುತ್ತೇವೆ,” ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ದೇಶವನ್ನು ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷೇತೋಟಗಳಲ್ಲಿಯಾಗಲಿ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನಿಮ್ಮ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅಪ್ಪಣೆಕೊಡು. ನಿಮ್ಮ ಹೊಲಗಳಿಗಾಗಲಿ ದ್ರಾಕ್ಷಿತೋಟಗಳಿಗಾಗಲಿ ನಾವು ತಿರುಗಿಕೊಳ್ಳುವುದಿಲ್ಲ. ನಿಮ್ಮ ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿಮ್ಮ ದೇಶವನ್ನು ದಾಟಿಹೋಗುವ ತನಕ ರಾಜಮಾರ್ಗದಲ್ಲಿಯೇ ಪ್ರಯಾಣ ಮಾಡುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:22
2 ತಿಳಿವುಗಳ ಹೋಲಿಕೆ  

ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು