Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:3 - ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಇಸ್ರಾಯೇಲರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸುವಂತೆ ಮಾಡಿದನು. ಅವರನ್ನು ಮತ್ತು ಅವರ ಪಟ್ಟಣಗಳನ್ನು ಇಸ್ರಾಯೇಲರು ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಆ ಪ್ರಾರ್ಥನೆಯನ್ನು ಕೇಳಿ ಇಸ್ರಾಯೇಲ್ಯರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಲಾಗಿ ಅವರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಶೇಷವಾಗಿ ನಾಶಮಾಡಿಬಿಟ್ಟರು. ಆದದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅವರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಜಯಿಸಲು ಸಹಾಯಮಾಡಿದ್ದರಿಂದ ಅವರು ಕಾನಾನ್ಯರನ್ನೂ ಅವರ ಗ್ರಾಮಗಳನ್ನೂ ಸಂಪೂರ್ಣವಾಗಿ ನಾಶಮಾಡಿಬಿಟ್ಟರು. ಆದ್ದರಿಂದ ಆ ಪ್ರದೇಶಕ್ಕೆ ಹೊರ್ಮಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:3
11 ತಿಳಿವುಗಳ ಹೋಲಿಕೆ  

ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.


ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II


ಹೊರ್ಮದವರು, ಬೋರಾಷಾನಿನವರು, ಅತಾಕಿನವರು, ಹೆಬ್ರೋನಿನವರು


ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ತರುವಾಯ ಯೆಹೂದಕುಲದವರು ತಮ್ಮ ಬಂಧುಗಳಾದ ಸಿಮೆಯೋನ್ ಕುಲದವರ ಸಂಗಡ ಹೋಗಿ ‘ಚೆಫತ್’ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ‘ಹೋರ್ಮಾ’ ಎಂದು ಕರೆದರು.


ಗೆದೆರಿನ ಅರಸ - 1 ಹೊರ್ಮದ ಅರಸ - 1 ಅರಾದಿನ ಅರಸ - 1


ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು