Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:32 - ಕನ್ನಡ ಸತ್ಯವೇದವು C.L. Bible (BSI)

32 ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:32
10 ತಿಳಿವುಗಳ ಹೋಲಿಕೆ  

‘ಸಿಬ್ಮ’ದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ದುಃಖಿಸುವುದಕ್ಕಿಂತಲು ನಿನ್ನನ್ನು ಕಂಡು ಹೆಚ್ಚಾಗಿ ದುಃಖಿಸುತ್ತೇನೆ. ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿವೆ. ಈಗ ನಿನ್ನ ಹಣ್ಣುಹಂಪಲುಗಳ ಮೇಲೆ ಹಾಗು ದ್ರಾಕ್ಷೆಯ ಸುಗ್ಗಿಯ ಮೇಲೆ ಸೂರೆಗಾರ ಬಂದೆರಗಿದ್ದಾನೆ.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮಾ,


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ಹೀಗೆ ಇಸ್ರಯೇಲರು ಅಮ್ಮೋನಿಯರ ನಾಡಿನಲ್ಲಿ ವಾಸಮಾಡುವಂತಾಯಿತು.


ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ,


ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.


ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು