Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:33 - ಕನ್ನಡ ಸತ್ಯವೇದವು C.L. Bible (BSI)

33 ಇಸ್ರಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಬಾಷಾನಿನ ಅರಸ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧ ಯುದ್ಧಮಾಡಲು ಎದ್ರೈವೂರಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇಸ್ರಾಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಸ್ರಾಯೇಲ್ಯರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಹತ್ತಿಹೋಗಲಾಗಿ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಎದ್ರೈವೂರಿಗೆ ಹೊರಟುಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಳಿಕ ಇಸ್ರೇಲರು ಬೇರೆ ದಿಕ್ಕಿಗೆ ತಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣಮಾಡಿದರು. ಆಗ ಬಾಷಾನಿನ ಅರಸನಾದ ಓಗನು ಎದ್ರೈ ಎಂಬಲ್ಲಿ ಇಸ್ರೇಲರೊಂದಿಗೆ ಯುದ್ಧಮಾಡಲು ತನ್ನ ಸೈನ್ಯ ಸಮೇತವಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:33
20 ತಿಳಿವುಗಳ ಹೋಲಿಕೆ  

ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು.


ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.


ಅಂದರೆ ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಲವತ್ತನೆಯ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ತನಗೆ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸಿದನು.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.


ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.


ಬಾಷಾನಿನ ಪರ್ವತವೇ, ನೀ ಮಹೋನ್ನತ I ಹಲವು ಶಿಖರಗಳಿಗಿಂತ ನೀ ಅಲಂಕೃತ II


ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ.


ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.


ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸ ಓಗನ ರಾಜ್ಯವನ್ನೂ ಜೋರ್ಡನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನೂ ಗೆದ್ದುಕೊಂಡಿದ್ದರು.


ಹೀಗೆ ಮೋಶೆ ಗಾದ್ಯರಿಗು, ರೂಬೇನ್ಯರಿಗು, ಹಾಗು ಜೋಸೆಫನ ಮಗನಾದ ಮನಸ್ಸೆಯ ಕುಲದ ಅರ್ಧ ಜನರಿಗು ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನು, ಬಾಷಾನಿನ ಅರಸನಾದ ಓಗನ ರಾಜ್ಯವನ್ನು, ಅವುಗಳ ಎಲ್ಲ ಊರುಗಳನ್ನು ಮತ್ತು ಆ ಊರುಗಳಿಗೆ ಸೇರಿದ ಎಲ್ಲ ಭೂಮಿಗಳನ್ನು ಕೊಟ್ಟನು.


ಪ್ರಭುವಿನ ನುಡಿ : “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II


ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II


ಬಾಷಾನಿನ ಅರಸನಾದ ಓಗನನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು