Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ, “ಈ ಮರುಭೂಮಿಯಲ್ಲಿ ಸಾಯಲೆಂದು ನಮ್ಮನ್ನು ಈಜಿಪ್ಟಿನಿಂದ ಯಾಕೆ ಬರಮಾಡಿದೆ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:5
19 ತಿಳಿವುಗಳ ಹೋಲಿಕೆ  

ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II


ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.


ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.


ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?


ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ.


ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II


ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.


ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.


“ನಾವೇನು ಕುಡಿಯಬೇಕು?” ಎಂದು ಜನರು ಮೋಶೆಯ ಮೇಲೆ ಗೊಣಗುಟ್ಟ ತೊಡಗಿದರು.


ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು