Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದದರಿಂದ ಜನರು ಮೋಶೆಯ ಬಳಿಗೆ ಬಂದು - ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:7
30 ತಿಳಿವುಗಳ ಹೋಲಿಕೆ  

ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.


ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II


ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸಿದ್ದೇ ಆ ಬೇಂಕಿ ಆರಿಹೋಯಿತು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.


ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.


ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.


ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು