Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:8 - ಕನ್ನಡ ಸತ್ಯವೇದವು C.L. Bible (BSI)

8 ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು. ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋಶೆ ಜನರಿಗೋಸ್ಕರ ಪ್ರಾರ್ಥಿಸಲಾಗಿ ಯೆಹೋವನು ಅವನಿಗೆ - ನೀನು [ತಾಮ್ರದಿಂದ] ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು; ಸರ್ಪಗಳಿಂದ ಗಾಯಪಟ್ಟವರು ಅದನ್ನು ನೋಡಿ ಬದುಕಿಕೊಳ್ಳುವರು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಮೋಶೆಗೆ, “ನೀನು ತಾಮ್ರದಿಂದ ವಿಷಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸಬೇಕು, ಸರ್ಪಗಳಿಂದ ಕಚ್ಚಿಸಿಕೊಂಡವನು ಅದನ್ನು ನೋಡಿದರೆ ಬದುಕಿಕೊಳ್ಳುವನು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:8
7 ತಿಳಿವುಗಳ ಹೋಲಿಕೆ  

ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II


ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.


“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು