Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:30 - ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಕತ್ತೆ, “ನಿನ್ನ ಜೀವಮಾನವೆಲ್ಲ, ಇಂದಿನ ತನಕ ಸವಾರಿ ಮಾಡುತ್ತಿದ್ದ ಕತ್ತೆ ನಾನಲ್ಲವೆ? ನಾನು ಎಂದಾದರೂ ಈ ರೀತಿ ಮಾಡಿದ್ದುಂಟೆ?” ಎಂದಿತು. ಆಗ ಬಿಳಾಮನು “ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದಕ್ಕೆ ಆ ಕತ್ತೆ - ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ; ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ ಅಂದಾಗ ಬಿಳಾಮನು ಇಲ್ಲವೆಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅದಕ್ಕೆ ಕತ್ತೆಯು ಬಿಳಾಮನಿಗೆ, “ನೋಡು, ನಾನು ನಿನ್ನ ಸ್ವಂತ ಕತ್ತೆ. ಅನೇಕಾನೇಕ ವರ್ಷಗಳಿಂದ ನೀನು ನನ್ನ ಮೇಲೆ ಸವಾರಿ ಮಾಡುತ್ತಿರುವೆ. ನಾನು ಹಿಂದೆಂದೂ ಹೀಗೆ ಮಾಡಲಿಲ್ಲವೆಂದು ನಿನಗೆ ತಿಳಿದದೆ” ಎಂದು ಹೇಳಿತು. ಅದಕ್ಕೆ ಬಿಳಾಮನು, “ಅದು ನಿಜ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:30
4 ತಿಳಿವುಗಳ ಹೋಲಿಕೆ  

ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.


ಅದಕ್ಕೆ ಬಿಳಾಮನು, “ನೀನು ಇಷ್ಟಬಂದಂತೆ ನನ್ನನ್ನು ಅತ್ತಿತ್ತ ಆಡಿಸಿದೆ; ನನ್ನ ಕೈಯಲ್ಲಿ ಕತ್ತಿಯಿದ್ದಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ,” ಎಂದನು.


ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು