Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:38 - ಕನ್ನಡ ಸತ್ಯವೇದವು C.L. Bible (BSI)

38 ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಬಿಳಾಮನು - ಅದಿರಲಿ; ನಾನು ಬಂದಿದ್ದೇನೆ; ಆದರೆ ಏನು? ಏನಾದರೂ ಹೇಳುವದಕ್ಕೆ ನನಗೆ ಶಕ್ತಿಯುಂಟೋ? ದೇವರು ಆಡಿಸುವ ಮಾತನ್ನೇ ಹೇಳುತ್ತೇನಷ್ಟೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಬಿಳಾಮನು, “ನಾನು ಈಗ ಬಂದಿದ್ದೇನೆ. ಆದರೆ, ನಿನಗೆ ಇಷ್ಟವಾಗುವಂಥದ್ದನ್ನು ಹೇಳಲು ನನಗೆ ಸಾಧ್ಯವಿಲ್ಲ. ದೇವರು ನನಗೆ ತಿಳಿಸುವುದನ್ನೇ ನಾನು ಹೇಳಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:38
16 ತಿಳಿವುಗಳ ಹೋಲಿಕೆ  

ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಅದಕ್ಕೆ ಬಿಳಾಮನು, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿ ಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಚಿಕ್ಕದಾಗಿರಲಿ ದೊಡ್ಡದಾಗಿರಲಿ ಉಲ್ಲಂಘಿಸಲಾರೆ.


ಅದಕ್ಕೆ ಬಿಳಾಮನು, “ಸರ್ವೇಶ್ವರ ಆಜ್ಞಾಪಿಸಿದ್ದನ್ನೇ ನಾನು ಮಾಡಬೇಕೆಂದು ನಿನಗೆ ಹೇಳಲಿಲ್ಲವೆ?” ಎಂದನು.


ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?


ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು.


ಇದಾದ ಬಳಿಕ ಬಿಳಾಮನು ಬಾಲಾಕನೊಂದಿಗೆ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.


ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು