ಅರಣ್ಯಕಾಂಡ 22:5 - ಕನ್ನಡ ಸತ್ಯವೇದವು C.L. Bible (BSI)5 ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೆಯೋರನ ಮಗನಾದ ಬಿಳಾಮನನ್ನು ಕರೆಸುವುದಕ್ಕೆ ಕೆಲವು ಸಂದೇಶಕರನ್ನು ಕಳುಹಿಸಿದನು. ಬಿಳಾಮನು ಯೂಫ್ರೆಟೀಸ್ ನದಿಯ ಬಳಿ “ಪೆತೋರ್” ಎಂಬ ಸ್ಥಳದಲ್ಲಿದ್ದನು. ಬಿಳಾಮನ ಜನರು ಇಲ್ಲಿ ವಾಸಿಸುತ್ತಿದ್ದರು. ಬಾಲಾಕನು ತನ್ನ ಸಂದೇಶಕರನ್ನು ಕಳುಹಿಸಿ ಬಿಳಾಮನಿಗೆ, “ಒಂದು ಜನಾಂಗವು ಈಜಿಪ್ಟಿನಿಂದ ಬಂದಿದೆ. ಅವರು ದೇಶವನ್ನೆಲ್ಲಾ ಮುಚ್ಚಿಕೊಂಡು ನನ್ನ ಪಕ್ಕದಲ್ಲಿ ನೆಲೆಸಿದ್ದಾರೆ. ಅವರು ನಮಗಿಂತ ಬಲಿಷ್ಠರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ. ಅಧ್ಯಾಯವನ್ನು ನೋಡಿ |