ಅರಣ್ಯಕಾಂಡ 23:14 - ಕನ್ನಡ ಸತ್ಯವೇದವು C.L. Bible (BSI)14 ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿ |