Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:17 - ಕನ್ನಡ ಸತ್ಯವೇದವು C.L. Bible (BSI)

17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ದಹನಬಲಿಯನ್ನು ಸಮರ್ಪಿಸಿದ ಪೀಠದ ಹತ್ತಿರವೇ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರು ಅವನ ಸಂಗಡವೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ಪೀಠದ ಹತ್ತಿರ ನಿಂತಿದ್ದನು; ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:17
5 ತಿಳಿವುಗಳ ಹೋಲಿಕೆ  

ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.


ಅದಕ್ಕೆ ಬಿಳಾಮನು, “ಸರ್ವೇಶ್ವರ ಆಜ್ಞಾಪಿಸಿದ್ದನ್ನೇ ನಾನು ಮಾಡಬೇಕೆಂದು ನಿನಗೆ ಹೇಳಲಿಲ್ಲವೆ?” ಎಂದನು.


ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.


ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು