Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:19 - ಕನ್ನಡ ಸತ್ಯವೇದವು C.L. Bible (BSI)

19 ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:19
36 ತಿಳಿವುಗಳ ಹೋಲಿಕೆ  

ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.


ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.


ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.


ಮಾಡಿರುವೆ ಪ್ರಮಾಣ ನನ್ನ ಪವಿತ್ರತೆಯ ಮೇಲೆ I ಸುಳ್ಳಾಡಲಾರೆ ದಾವೀದನಿಗೀ ವಿಷಯದ ಮೇಲೆ II


ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.


ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.


ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.


“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.


ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:


ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II


“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”


ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.


ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.


ಇದೆಲ್ಲವು ನೆಬೂಕದ್ನೆಚ್ಚರನೆಂಬ ರಾಜನಿಗೆ ಸಂಭವಿಸಿದವು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನ ತಪ್ಪದೆ ನೆರವೇರಿಸುವೆನು.


ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.


ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು