ಅರಣ್ಯಕಾಂಡ 23:23 - ಕನ್ನಡ ಸತ್ಯವೇದವು C.L. Bible (BSI)23 ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾಕೋಬ್ಯರಲ್ಲಿ ಶಕುನನೋಡುವದು ಇಲ್ಲ; ಇಸ್ರಾಯೇಲ್ಯರಲ್ಲಿ ಕಣಿಕೇಳುವದು ಇಲ್ಲ. ದೇವರು ತಾನು ಮಾಡುವ ಕೆಲಸವನ್ನು ತತ್ಕಾಲದಲ್ಲೇ ಯಾಕೋಬ್ಯರಿಗೆ ತಿಳಿಸುತ್ತಾನೆ; ಸಮಯೋಚಿತವಾಗಿ ಅದನ್ನು ಇಸ್ರಾಯೇಲ್ಯರಿಗೆ ತೋರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.