ಅರಣ್ಯಕಾಂಡ 23:24 - ಕನ್ನಡ ಸತ್ಯವೇದವು C.L. Bible (BSI)24 ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಜನಾಂಗದವರು ಪ್ರಾಯದ ಸಿಂಹದಂತೆ ಎದ್ದು ಮೃಗೇಂದ್ರನಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ರಕ್ತವನ್ನು ಕುಡಿದು ಮಾಂಸವನ್ನು ತಿಂದು ತೃಪ್ತಿಹೊಂದಿದ ಹೊರತು ಮಲಗುವದಿಲ್ಲವಷ್ಟೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು. ಅವರು ಸಿಂಹದಂತೆ ಹೋರಾಡುತ್ತಾರೆ. ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ. ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.” ಅಧ್ಯಾಯವನ್ನು ನೋಡಿ |
ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.