Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:28 - ಕನ್ನಡ ಸತ್ಯವೇದವು C.L. Bible (BSI)

28 ಅಲ್ಲಿಂದ ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಕೆಳಗಿರುವ ‘ಯೆಷೀಮೋನ್’ ಎಂಬ ಮರುಭೂಮಿ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:28
5 ತಿಳಿವುಗಳ ಹೋಲಿಕೆ  

ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ.


ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II


ಆ ಬಳಿಕ ಬಾಲಾಕನು, “ಬಾ, ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದುಕೊಂಡು ಹೋಗುತ್ತೇನೆ. ಬಹುಶಃ ಅಲ್ಲಿಯಾದರು ನೀನು ಅವರನ್ನು ಶಪಿಸುವಂತೆ ದೇವರು ಅನುಮತಿಸಬಹುದು,” ಎಂದು ಹೇಳಿದನು.


ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.


ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು