Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 23:7 - ಕನ್ನಡ ಸತ್ಯವೇದವು C.L. Bible (BSI)

7 “ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಬಿಳಾಮನು ಪದ್ಯರೂಪವಾಗಿ ನುಡಿದದ್ದೇನಂದರೆ - ಬಾಲಾಕನು ನನ್ನನ್ನು ಅರಾವಿುನಿಂದ ಕರಿಸಿದನು; ಮೋವಾಬ್ಯರ ಅರಸನು ಮೂಡಲಬೆಟ್ಟಗಳಿಂದ ನನ್ನನ್ನು ಬರಮಾಡಿದನು. ನೀನು ಬಂದು ಯಾಕೋಬವಂಶದವರನ್ನು ನನಗೋಸ್ಕರ ಶಪಿಸಬೇಕು; ಇಸ್ರಾಯೇಲ್ಯರಿಗೆ ದುರ್ಗತಿಯುಂಟಾಗಲಿ ಎಂದು ಆಕ್ರೋಶಿಸಬೇಕು ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. ‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 23:7
31 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.


ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ


ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಯೋಬನು ಮತ್ತೆ ಪ್ರಸ್ತಾಪವೆತ್ತಿ ಇಂತೆಂದನು:


ಬಿಳಾಮನು ಮುಂದುವರೆದು ನುಡಿದದ್ದು ಏನೆಂದರೆ: ಅಯ್ಯೋ, ದೇವರೇ ಹೀಗೆ ಮಾಡುವಾಗ ಉಳಿಯುವವರಾರು?


ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”


ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.


ಯೋಬನು ಮತ್ತೆ ಪ್ರಸ್ತಾಪವೆತ್ತಿ ಹೀಗೆಂದನು:


ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.


ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ


ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.


‘ದಯಮಾಡಿ ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಹೊರಟು ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನೀನು ಬಂದು ಅವರಿಗೆ ಶಾಪಹಾಕಬೇಕು; ಹಾಕಿದರೆ ಅವರನ್ನು ಸೋಲಿಸಿ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,‘ ಎಂದು ಹೇಳಿಕಳಿಸಿದ್ದಾನೆ,” ಎಂದು ಉತ್ತರಕೊಟ್ಟನು.


ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.


ಮೆಸಪೊಟೇಮಿಯಾ ನಾಡಿನಲ್ಲಿರುವ ನಿನ್ನ ತಾತ ಬೆತೂವೇಲನ ಮನೆಗೆ ಹೊರಟುಹೋಗು. ಅಲ್ಲಿ ನಿನ್ನ ಸೋದರಮಾವನಾದ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊ,” ಎಂದು ಅಪ್ಪಣೆ ಮಾಡಿದನು.


ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.


ಬಿಳಾಮನು ಬಾಲಾಕನ ಬಳಿಗೆ ಬಂದಾಗ ತಾನು ದಹನಬಲಿಯನ್ನು ಸಮರ್ಪಿಸಿದ್ದ ಪೀಠದ ಹತ್ತಿರವೆ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರೆಲ್ಲರು ಅವನ ಬಳಿಯಲ್ಲೆ ಇದ್ದರು. ಆಗ ಬಿಳಾಮನು ಪದ್ಯರೂಪದಲ್ಲಿ ಹೀಗೆಂದು ನುಡಿದನು:


ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು