Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:17 - ಕನ್ನಡ ಸತ್ಯವೇದವು C.L. Bible (BSI)

17 ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಒಬ್ಬಾತನನ್ನು ನೋಡುತ್ತಿದ್ದೇನೆ, ಆತನು ಈಗಿನವನಲ್ಲ; ಆತನು ಕಾಣಿಸುತ್ತಾನೆ, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬವಂಶದವರಲ್ಲಿ ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ; ಇಸ್ರಾಯೇಲ್ಯರಲ್ಲಿ ರಾಜದಂಡ ಹಿಡಿದವನು ಕಂಡುಬಂದಿದ್ದಾನೆ. ಅವನು ಮೋವಾಬ್ಯರ ತಲೆಯನ್ನು ಸೀಳಿಹಾಕಿದ್ದಾನೆ; ಯುದ್ಧವೀರರೆಲ್ಲರನ್ನೂ ಕೆಡವಿ ಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ. ಆದರೆ ಈಗಲ್ಲ. ಬರುತ್ತಿರುವ ಒಬ್ಬನನ್ನು ನೋಡುತ್ತಿದ್ದೇನೆ, ಆದರೆ ಬೇಗನೆ ಅಲ್ಲ. ಯಾಕೋಬನ ವಂಶದಿಂದ ನಕ್ಷತ್ರವೊಂದು ಬರುವುದು. ಇಸ್ರೇಲರಿಂದ ಅರಸನೊಬ್ಬನು ಬರುವನು. ಅವನು ಮೋವಾಬ್ಯರ ತಲೆಯನ್ನು ಜಜ್ಜುವನು. ಆ ಅರಸನು ಶೇತನ ಪುತ್ರರೆಲ್ಲರ ತಲೆಗಳನ್ನು ಜಜ್ಜುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:17
33 ತಿಳಿವುಗಳ ಹೋಲಿಕೆ  

“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಆದರೆ ಅಹಾಬನು ಮರಣ ಹೊಂದಿದ ನಂತರ ಇವನು ಇಸ್ರಯೇಲರ ಅರಸನಿಗೆ ವಿರುದ್ಧ ದಂಗೆಯೆದ್ದನು.


ಆಗ ಸೌಲನು ಜನರ ಮುಖಂಡರಿಗೆ, “ನೀವೆಲ್ಲರೂ ಇಲ್ಲಿಗೆ ಬಂದು, ಈ ದಿನ ಎಲ್ಲಿ ಪಾಪಕೃತ್ಯ ನಡೆದಿದೆ ಎಂದು ವಿಚಾರಿಸಿ ಗುರುತು ಹಚ್ಚಿರಿ.


ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು