Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪವಾಗಿ ಇಂತೆಂದನು - ಬೆಯೋರನ ಮಗನಾದ ಬಿಳಾಮನಿಗುಂಟಾದ ದೇವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನಿಗೆ ಬಂದ ದೇವೋಕ್ತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಅವನು ದೇವರಾತ್ಮ ಪ್ರೇರಿತನಾಗಿ ಹೀಗೆಂದನು: “ಬೆಯೋರನ ಮಗನಾದ ಬಿಳಾಮನ ಸಂದೇಶವಿದು. ನನ್ನ ಕಣ್ಣುಗಳು ತೆರೆಯಲ್ಪಟ್ಟಿವೆ. ನಾನು ನೋಡುವುದನ್ನೇ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಪ್ರವಾದಿಸಿದನು: “ಇದು ಬೆಯೋರನ ಮಗ ಬಿಳಾಮನ ಪ್ರವಾದನೆ: ಸ್ಪಷ್ಟ ಕಣ್ಣುಳ್ಳವನು ನುಡಿದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:3
9 ತಿಳಿವುಗಳ ಹೋಲಿಕೆ  

ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.


ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:


ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.


ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:


ಯೋಬನು ಮತ್ತೆ ಪ್ರಸ್ತಾಪವೆತ್ತಿ ಇಂತೆಂದನು:


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು