Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:4 - ಕನ್ನಡ ಸತ್ಯವೇದವು C.L. Bible (BSI)

4 ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ದೇವರ ಮಾತುಗಳನ್ನು ಕೇಳುವವನಾಗಿಯೂ ಪರವಶವಾಗಿ ಕಣ್ಣು ತೆರೆದು ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಇರುವ ಪುರುಷನಿಗುಂಟಾದ ದೇವೋಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಈ ಸಂದೇಶವನ್ನು ದೇವರಿಂದ ಕೇಳಿದೆನು. ಸರ್ವಶಕ್ತನಾದ ದೇವರು ತೋರಿಸಿದವುಗಳನ್ನು ನೋಡಿದೆನು. ನಾನು ಸ್ಪಷ್ಟವಾಗಿ ನೋಡುವುದನ್ನು ದೀನತೆಯಿಂದ ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:4
20 ತಿಳಿವುಗಳ ಹೋಲಿಕೆ  

ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.


ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.


“ನಾನು ಜೆರುಸಲೇಮಿಗೆ ಹಿಂದಿರುಗಿ ಒಂದು ದಿನ ಮಹಾದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಾ ಧ್ಯಾನಪರವಶನಾದೆ.


ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ,


ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕು ಎನಿಸಿತು. ಊಟ ಸಿದ್ಧವಾಗುತ್ತಿದ್ದಂತೆ, ಪೇತ್ರನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡನು.


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.


ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.


ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.


ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!


ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು