Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:7 - ಕನ್ನಡ ಸತ್ಯವೇದವು C.L. Bible (BSI)

7 ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರ ಕಪಿಲೆಗಳಿಂದ ನೀರು ಹರಿಯುತ್ತಲೇ ಇದೆ; ಅವರ ಬಿತ್ತನೆಗೆ ಬೇಕಾದಷ್ಟು ನೀರಿದೆ. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು; ಅವರ ರಾಜ್ಯವು ಅಭಿವೃದ್ಧಿಯಲ್ಲಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮಗೆ ಯಾವಾಗಲೂ ಬೇಕಾದಷ್ಟು ನೀರು ಇರುವುದು; ನೀವು ಬಿತ್ತಿದ ಬೀಜಗಳು ಬೆಳೆಯಲು ಸಾಕಷ್ಟು ನೀರು ಇರುವುದು. ನಿಮ್ಮ ಅರಸನು ಆಗಾಗ್ ಎಂಬವನಿಗಿಂತಲೂ ದೊಡ್ಡವನಾಗಿದ್ದಾನೆ. ನಿಮ್ಮ ರಾಜ್ಯವು ಬಹಳ ಬಲಿಷ್ಠವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:7
29 ತಿಳಿವುಗಳ ಹೋಲಿಕೆ  

ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.


ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು