Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 24:9 - ಕನ್ನಡ ಸತ್ಯವೇದವು C.L. Bible (BSI)

9 ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಜನಾಂಗವು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡದೆ; ಮೃಗೇಂದ್ರನಿಗೆ ಸಮನಾದ ಆ ಜನವನ್ನು ಕೆಣಕುವದು ಯಾರಿಂದಾದೀತು. ಇಸ್ರಾಯೇಲ್ಯರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ ಶಪಿಸುವವನಿಗೆ ಶಾಪವೂ ಉಂಟಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 24:9
21 ತಿಳಿವುಗಳ ಹೋಲಿಕೆ  

"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ.


ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.


ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.


ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.


ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.


ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಟಿಲುಗಳೂ ಬಂಗಾರದ ಪಾದಪೀಠವೂ ಇದ್ದವು.


ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು