ಅರಣ್ಯಕಾಂಡ 25:11 - ಕನ್ನಡ ಸತ್ಯವೇದವು C.L. Bible (BSI)11 “ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವ ಪ್ರಕಾರ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ನನ್ನ ಗೌರವವನ್ನು ಕಾಪಾಡಿದ್ದರಿಂದ ಇಸ್ರಾಯೇಲರ ಮೇಲಿದ್ದ ನನ್ನ ಕೋಪವನ್ನು ತೊಲಗಿಸಿದ್ದಾನೆ. ಹೀಗಿರುವುದರಿಂದ ನಾನು ನನ್ನ ಗೌರವವನ್ನು ಕಾಪಾಡಿಕೊಳ್ಳುವುದಕ್ಕಾಗಿ ಇಸ್ರಾಯೇಲರನ್ನು ನಿರ್ಮೂಲಮಾಡಬೇಕಾದ ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ. ಅಧ್ಯಾಯವನ್ನು ನೋಡಿ |