Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:12 - ಕನ್ನಡ ಸತ್ಯವೇದವು C.L. Bible (BSI)

12 ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಪ್ಪಂದವನ್ನು ಮಾಡಿಕೊಳ್ಳುತ್ತೇನೆಂದು ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆಂದು ಎಲ್ಲರಿಗೂ ತಿಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:12
9 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಫಿನೆಹಾಸನೆದ್ದು ದಂಡಿಸಿದೊಡನೆ I ನಿಂತುಹೋಯಿತು ಆ ಘೋರ ಬೇನೆ II


ಆತ ಮಾಡಿದಾ ನೈಪುಣ್ಯ I ಆಯಿತು ತಲಾಂತರಕು ಗಣ್ಯ II


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು