ಅರಣ್ಯಕಾಂಡ 25:4 - ಕನ್ನಡ ಸತ್ಯವೇದವು C.L. Bible (BSI)4 ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರಿಗೆ ಯೆಹೋವನಿಗೋಸ್ಕರ ಬಹಿರಂಗವಾಗಿ ಮರಣದಂಡನೆಯನ್ನು ಮಾಡಿಸಬೇಕು; ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲ್ಯರಿಂದ ತೊಲಗಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೆಹೋವನು ಮೋಶೆಗೆ, “ನೀನು ಜನರ ನಾಯಕರನ್ನೆಲ್ಲ ಬಂಧಿಸಿ ಯೆಹೋವನ ಮುಂದೆ ಬಹಿರಂಗವಾಗಿ ಅವರನ್ನು ನೇಣುಗಂಬಕ್ಕೆ ಏರಿಸು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರೇಲರಿಂದ ತೊಲಗಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.” ಅಧ್ಯಾಯವನ್ನು ನೋಡಿ |