ಅರಣ್ಯಕಾಂಡ 25:6 - ಕನ್ನಡ ಸತ್ಯವೇದವು C.L. Bible (BSI)6 ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಸ್ರಾಯೇಲ್ಯರ ವರ್ಗಸಮೂಹದವರು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಅಳುತ್ತಿರುವಾಗ ಇಸ್ರಾಯೇಲ್ಯನಾದ ಒಬ್ಬ ಮನುಷ್ಯನು ಮೋಶೆಗೂ ಸರ್ವಸಮೂಹದವರಿಗೂ ಎದುರಾಗಿಯೇ ಒಬ್ಬ ವಿುದ್ಯಾನ್ ಸ್ತ್ರೀಯನ್ನು ತನ್ನ ಕುಲದವರ ಬಳಿಗೆ ಕರಕೊಂಡು ಬರುವದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಮೋಶೆ ಮತ್ತು ಇಡೀ ಇಸ್ರೇಲ್ ಸಮುದಾಯವು ಒಟ್ಟಾಗಿ ಸೇರಿಬಂದು ದೇವದರ್ಶನಗುಡಾರದ ಬಾಗಿಲಲ್ಲಿ ಅಳುತ್ತಿದ್ದರು. ಅಷ್ಟರಲ್ಲಿ ಇಸ್ರೇಲ್ ಮನುಷ್ಯನೊಬ್ಬನು ಮಿದ್ಯಾನ್ ಸ್ತ್ರೀಯೊಬ್ಬಳನ್ನು ತನ್ನ ಸಂಬಂಧಿಕರ ಬಳಿಗೆ ಕರೆದುಕೊಂಡು ಬಂದನು. ಮೋಶೆಯ ಮತ್ತು ಎಲ್ಲಾ ಜನರ ಕಣ್ಣೆದುರಿನಲ್ಲೇ ಅವನು ಹೀಗೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು. ಅಧ್ಯಾಯವನ್ನು ನೋಡಿ |