Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:7 - ಕನ್ನಡ ಸತ್ಯವೇದವು C.L. Bible (BSI)

7 ಕೂಡಲೆ ಮಹಾಯಾಜಕ ಆರೋನನ ಮೊಮ್ಮಗನೂ ಹಾಗು ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಗೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕೂಡಲೆ ಮಹಾಯಾಜಕನಾದ ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನಾದ ಫೀನೆಹಾಸನು ಸಭೆಯ ಮಧ್ಯದಲ್ಲಿ ಎದ್ದು ಈಟಿಯನ್ನು ಕೈಯಲ್ಲಿ ಹಿಡಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೂಡಲೆ ಮಾಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಯಲ್ಲಿ ಹಿಡಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕೂಡಲೇ ಯಾಜಕನಾಗಿದ್ದ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:7
12 ತಿಳಿವುಗಳ ಹೋಲಿಕೆ  

ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಫಿನೆಹಾಸನೆದ್ದು ದಂಡಿಸಿದೊಡನೆ I ನಿಂತುಹೋಯಿತು ಆ ಘೋರ ಬೇನೆ II


ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಆಗ ಸರ್ವೇಶ್ವರನಿಂದ ಬಂದ ದುರಾತ್ಮವೊಂದು ಅವನನ್ನು ಆವರಿಸಿತು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.


ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು


ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.


ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.


ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು