Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಮೋಶೆಗೂ ಈಜಿಪ್ಟಿನಿಂದ ಬಂದಿದ್ದ ಇಸ್ರಯೇಲರಿಗೂ ಆಜ್ಞಾಪಿಸಿದ್ದಂತೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ಇಸ್ರಯೇಲರನ್ನು ಲೆಕ್ಕಿಸಿದರು: ಅದರ ವಿವರ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಯೆಹೋವನು ಮೋಶೆಗೆ ಅಜ್ಞಾಪಿಸಿದಂತೆ ಐಗುಪ್ತ ದೇಶದಿಂದ ಹೊರಟ್ಟಿದ್ದ ಮತ್ತು ಮಹಾಯಾಜಕನಾದ ಎಲ್ಲಾಜಾರನೂ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಲೆಕ್ಕಿಸಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆಯೂ ಮಹಾಯಾಜಕ ಎಲ್ಲಾಜಾರನೂ ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರಲ್ಲಿ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಿಸಿದರು. [ಅದರ ವಿವರ ಹೇಗಂದರೆ - ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ನೀವು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚು ವಯಸ್ಸಾದ ಗಂಡಸರನ್ನು ಲೆಕ್ಕಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:4
6 ತಿಳಿವುಗಳ ಹೋಲಿಕೆ  

ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.


ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು.


ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.


ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು