Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:61 - ಕನ್ನಡ ಸತ್ಯವೇದವು C.L. Bible (BSI)

61 ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದ್ದರಿಂದ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ನಾದಬ್ ಅಬೀಹೂ ಎಂಬಿಬ್ಬರು ಯೆಹೋವನ ಸನ್ನಿಧಿಯಲ್ಲಿ ಆತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯಿಂದ ಧೂಪವನ್ನು ಸಮರ್ಪಿಸಿದದರಿಂದ ಸತ್ತು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:61
4 ತಿಳಿವುಗಳ ಹೋಲಿಕೆ  

ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು.


ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು