Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:63 - ಕನ್ನಡ ಸತ್ಯವೇದವು C.L. Bible (BSI)

63 ಜೋರ್ಡನ್ ನದಿ ತೀರದಲ್ಲಿ, ಜೆರಿಕೋ ಪಟ್ಟಣದ ಹತ್ತಿರವಿದ್ದ ಮೋವಾಬ್ಯರ ಮೈದಾನದಲ್ಲಿ ಮೋಶೆ ಮತ್ತು ಯಾಜಕ ಎಲ್ಲಾಜಾರನು ಇಸ್ರಯೇಲರ ಜನಗಣತಿ ಮಾಡಿದಾಗ ಇದ್ದ ಜನಸಂಖ್ಯೆ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಯೊರ್ದನ್ ಹೊಳೆಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲ್ಯರ ಜನಸಂಖ್ಯೆ ನೋಡಿದಾಗ ಲೆಕ್ಕಿಸಲ್ಪಟ್ಟವರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಮೋಶೆ ಮತ್ತು ಯಾಜಕನಾದ ಎಲ್ಲಾಜಾರನು ಈ ಜನರನ್ನೆಲ್ಲಾ ಲೆಕ್ಕಿಸಿದರು. ಇಸ್ರೇಲರು ಜೋರ್ಡನ್ ಹೊಳೆಯ ತೀರದಲ್ಲಿ ಜೆರಿಕೊ ಪಟ್ಟಣದ ಆಚೆಯಲ್ಲಿ ಮೋವಾಬ್ಯರ ಬಯಲುಗಳಲ್ಲಿದ್ದಾಗ ಇವರನ್ನು ಲೆಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:63
5 ತಿಳಿವುಗಳ ಹೋಲಿಕೆ  

ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.


ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ : 23,000 ಇತ್ತು.


ಮೋಶೆ ಮತ್ತು ಯಾಜಕ ಆರೋನನು ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರ ಜನಗಣತಿ ಮಾಡಿದಾಗ ಎಣಿಕೆಯಾದವರಲ್ಲಿ ಒಬ್ಬರಾದರೂ ಇವರಲ್ಲಿರಲಿಲ್ಲ.


ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.


ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು