Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:65 - ಕನ್ನಡ ಸತ್ಯವೇದವು C.L. Bible (BSI)

65 ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

65 ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಯೆಹೋವನು ಅವರೆಲ್ಲರೂ ಮರುಭೂಮಿಯಲ್ಲಿಯೇ ಸಾಯುವರೆಂದು ಹೇಳಿದ್ದನು. ಆದ್ದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:65
20 ತಿಳಿವುಗಳ ಹೋಲಿಕೆ  

ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು.


ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.


ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ:


ನೀವಾದರೋ ಈ ಮರುಭೂಮಿಯಲ್ಲೇ ಬೀಳುವ ತನಕ


“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.


ಆಯಾ ಕುಲದಿಂದ ನೀವು ನೇಮಿಸಬೇಕಾದವರು ಇವರು: ಯೆಹೂದ ಕುಲದಿಂದ ಯೆಫುನ್ನೆಯ ಮಗ ಕಾಲೇಬ್,


‘ಯೆಫುನ್ನೆಯ ಮಗ ಕಾಲೇಬನೊಬ್ಬನೇ ಸರ್ವೇಶ್ವರನಾದ ನನ್ನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೆ ಹಾಗು ಅವನ ಸಂತತಿ ಅವರಿಗೆ ಕೊಡುವೆನು,’ ಎಂದು ಹೇಳಿದರು.


ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.


ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು