Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:11 - ಕನ್ನಡ ಸತ್ಯವೇದವು C.L. Bible (BSI)

11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಕೊಡಬೇಕು; ಇವನೇ ಅದನ್ನು ಅನುಭೋಗಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲ್ಯರಿಗೆ ನ್ಯಾಯವಿಧಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನು ಬದ್ಧವಾದ ವಿಧಿಯಾಗಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:11
7 ತಿಳಿವುಗಳ ಹೋಲಿಕೆ  

ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.


ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.


ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.


ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.


ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ತಂದೆಯ ಅಣ್ಣತಮ್ಮಂದಿರಿಗೆ ಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು