Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:7 - ಕನ್ನಡ ಸತ್ಯವೇದವು C.L. Bible (BSI)

7 ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಚಲ್ಪಹಾದನ ಹೆಣ್ಣು ಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಕುಲದವರೊಂದಿಗೆ ಅವರಿಗೂ ನೀನು ಸ್ವತ್ತನ್ನು ಕೊಡಬೇಕು. ತಂದೆಯ ಸ್ವತ್ತು ಅವರಿಗೆ ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ. ಅವರ ತಂದೆಯ ಸಂಬಂಧಿಕರೊಡನೆ ಅವರಿಗೂ ನೀನು ಸ್ವಾಸ್ತ್ಯವನ್ನು ಕೊಡಬೇಕು. ಅವರ ತಂದೆಯ ಸ್ವಾಸ್ತ್ಯವನ್ನು ನೀನು ಅವರಿಗೆ ವರ್ಗಾವಣೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:7
10 ತಿಳಿವುಗಳ ಹೋಲಿಕೆ  

ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ.


ಇದಲ್ಲದೆ ಇಸ್ರಯೇಲರಿಗೆ ನೀನು ಹೀಗೆಂದು ಆಜ್ಞಾಪಿಸು: ಯಾವನಾದರು ಮಗನಿಲ್ಲದೆ ಸತ್ತರೆ ಅವನ ಸೊತ್ತು ಅವನ ಮಗಳಿಗೆ ಸೇರಬೇಕು.


ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.


ಆಗ ಮೋಶೆ ಸರ್ವೇಶ್ವರನಿಂದ ಅಪ್ಪಣೆಯನ್ನು ಹೊಂದಿ ಇಸ್ರಯೇಲರಿಗೆ, “ಜೋಸೆಫನ ಕುಲದವರು ಹೇಳುವ ಮಾತು ನ್ಯಾಯವಾದುದು.


ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು