Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:10 - ಕನ್ನಡ ಸತ್ಯವೇದವು C.L. Bible (BSI)

10 ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿತ್ಯ ಸರ್ವಾಂಗಹೋಮವು ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ಸರ್ವಾಂಗಹೋಮವು, ಅದರ ಪಾನದ್ರವ್ಯದ ಅರ್ಪಣೆಯೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:10
16 ತಿಳಿವುಗಳ ಹೋಲಿಕೆ  

ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.


ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ಪಾಪ ಪರಿಹಾರಕಬಲಿಗಾಗಿ ಒಂದು ಹೋತವನ್ನು ಕೂಡ ಅರ್ಪಿಸಬೇಕು.


ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು.


ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.


ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.


ನಿತ್ಯಗಟ್ಟಲೆಯಾಗಿ ಪ್ರತಿದಿನ ಬೆಳಿಗ್ಗೆ ಒಪ್ಪಿಸಲಾಗುವ ದಹನಬಲಿಯ ಜೊತೆಗೆ ಇವುಗಳನ್ನು ಸೇರಿಸಿ ಸಮರ್ಪಿಸಬೇಕು.


ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:


‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು