Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:11 - ಕನ್ನಡ ಸತ್ಯವೇದವು C.L. Bible (BSI)

11 ‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:11
32 ತಿಳಿವುಗಳ ಹೋಲಿಕೆ  

ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”


ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.


ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.


ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.


ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ನೀವು ಶುಭಾಶುಭ ದಿನಗಳನ್ನು, ಮಾಸಗಳನ್ನು ಮತ್ತು ಸಂವತ್ಸರಗಳನ್ನು ಜಾಗರೂಕತೆಯಿಂದ ನೋಡುತ್ತೀರಿ.


ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ?


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.


ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;


ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.


ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.


ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.


“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;


ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.


ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.


“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ದೇವರಿತ್ತ ನಿಯಮವದು ಯಕೋಬ್ಯರಿಗೆ I ಕೊಟ್ಟಕಟ್ಟಳೆಯದು ಇಸ್ರಯೇಲರಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು